ADVERTISEMENT

ಅಧಿಕಾರದಿಂದ ಇಳಿಸಿದವರನ್ನೇ ತಬ್ಬಿದ ಎಚ್‌ಡಿಕೆ: ಡಿ.ಕೆ. ಶಿವಕುಮಾರ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2023, 23:30 IST
Last Updated 15 ಸೆಪ್ಟೆಂಬರ್ 2023, 23:30 IST
ಡಿ.ಕೆ ಶಿವಕುಮಾರ್‌
ಡಿ.ಕೆ ಶಿವಕುಮಾರ್‌   

ಬೆಂಗಳೂರು: ‘ತನ್ನ ನೇತೃತ್ವದ ಸರ್ಕಾರವನ್ನು ಉರುಳಿಸಿದವರನ್ನೇ ಜತೆಯಲ್ಲಿ ಕೂರಿಸಿಕೊಂಡು ಪ್ರತಿಭಟಿಸುವ, ಅವರನ್ನು ತಬ್ಬಿಕೊಳ್ಳುವ ದುಃಸ್ಥಿತಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬಂದಿದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ವಿವಿಧ ಪಕ್ಷಗಳ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಿಜೆಪಿ– ಜೆಡಿಎಸ್‌ ಮೈತ್ರಿ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ, ಸರ್ಕಾರ ಉರುಳಿಸಿದವರ ಬಳಿ ಏಕೆ ನೆಂಟಸ್ತಿಕೆ ಮಾಡಬೇಕು ಎಂಬ ಪ್ರಶ್ನೆ ಜೆಡಿಎಸ್‌ ಕಾರ್ಯಕರ್ತರಲ್ಲಿದೆ’ ಎಂದರು.

ಚುನಾವಣೆ ಮುಗಿದು 110 ದಿನಗಳಾದರೂ ವಿರೋಧ ಪಕ್ಚದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ ಅನುಕೂಲಸಿಂಧು ರಾಜಕಾರಣ ಮಾಡುತ್ತಿವೆ ಎಂದು ದೂರಿದರು.

ADVERTISEMENT

ಪಕ್ಷ ಸೇರುವವರಿಗೆ ಸ್ವಾಗತ. ಎಲ್ಲರಿಗೂ ಅವಕಾಶಗಳು ದೊರಕುತ್ತವೆ. ಅದಕ್ಕಾಗಿ ತಾಳ್ಮೆಯಿಂದ ಕಾಯಬೇಕು. ಯಾರೂ ಅವಸರ ಮಾಡಬಾರದು. ಕಾಂಗ್ರೆಸ್‌ ಪಕ್ಷ ಸೇರಲು ಬಂದವರನ್ನು ತಡೆದು, ಅಡ್ಡಿಪಡಿಸಲಾಗಿತ್ತು. ಬಿಜೆಪಿಗೆ ಈಗ ಕಾರ್ಯಕರ್ತರು ನೆನಪಾಗುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.