ಬೆಂಗಳೂರು: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಹೇಳಿಕೊಂಡಿರುವುದರಲ್ಲಿ ತಪ್ಪೇನಿದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ ಶಿವಕುಮಾರ್, ‘ಖರ್ಗೆ ಅವರು ತಮ್ಮ ಭಾವನೆಯನ್ನು ಹೇಳಿಕೊಂಡಿದ್ದಾರೆ’ ಎಂದರು.
‘ಕಾಂಗ್ರೆಸ್‌ನ ಹಿರಿಯ ನಾಯಕರಾದ ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ತಮ್ಮ ಭಾವನೆಗಳನ್ನು ಅವರು ಹೇಳಿಕೊಂಡಿದ್ದಾರೆ’ ಎಂದರು.
ರಾಜ್ಯ ರಾಜಕಾರಣಕ್ಕೆ ಖರ್ಗೆ ಅವರು ಮರಳಿ ಬರುತ್ತಾರೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, ‘ಈ ಬಗ್ಗೆಯೂ ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಅವರವರ ಅಭಿಪ್ರಾಯ ಅವರು ತಿಳಿಸುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.