ADVERTISEMENT

ಚಿಲುಮೆ ಟ್ರಸ್ಟ್ ಕಚೇರಿಯಲ್ಲಿ ನೋಟು ಎಣಿಕೆ ಯಂತ್ರವೇಕೆ: ಡಿಕೆಶಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 9:46 IST
Last Updated 19 ನವೆಂಬರ್ 2022, 9:46 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ಸಾಮಾಜಿಕ ಸೇವೆ ಮಾಡುವುದಾಗಿ ಹೇಳಿಕೊಂಡಿರುವ ಚಿಲುಮೆ ಟ್ರಸ್ಟ್ ಕಚೇರಿಯಲ್ಲಿ ನೋಟು ಎಣಿಕೆ ಯಂತ್ರವನ್ನು ಏಕೆ ಇರಿಸಿಕೊಳ್ಳಲಾಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಕೆಪಿಸಿಸಿ ಕಚೇರಿಯಿಂದ ಶನಿವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಯಾವುದೇ ಟ್ರಸ್ಟ್ ₹2,000ಕ್ಕಿಂತ ಹೆಚ್ಚು ನಗದು ದೇಣಿಗೆ ಪಡೆಯುವಂತಿಲ್ಲ. ಆದರೆ, ಚಿಲುಮೆ ಕಚೇರಿಯಲ್ಲಿ ಪೊಲೀಸರು ನಡೆಸದ ಶೋಧದ ವೇಳೆ ಎರಡು ನೋಟು ಎಣಿಕೆ ಯಂತ್ರಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭಿಸಿದೆ. ಯಾವ ಹಣ ಎಣಿಸಲು ಟ್ರಸ್ಟ್ ಕಚೇರಿಯಲ್ಲಿ ಯಂತ್ರ ಇರಿಸಲಾಗಿತ್ತು ಎಂದು ಪ್ರಶ್ನಿಸಿದರು.

ADVERTISEMENT

ಚಿಲುಮೆ ಕಚೇರಿಯಲ್ಲಿ ಕಪ್ಪು ಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸುವ ಕೆಲಸ ನಡೆಯುತ್ತಿತ್ತು. ಈ ವಿಚಾರದಲ್ಲಿ ದಾಖಲೆ ಸಮೇತ ಮಾತನಾಡುತ್ತೇವೆ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ದಾಖಲೆ ಸಹಿತ ದೂರು ನೀಡಿದ್ದೇವೆ. ಆದರೆ, ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.