ನವದೆಹಲಿ: ‘ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ. ಶಾ ಅವರನ್ನು ಭೇಟಿಯಾಗಲು ನನಗೆ ತಲೆ ಕೆಟ್ಟಿದೆಯಾ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆಯೇ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.
‘ಮೇಕೆದಾಟು ಪ್ರಕರಣದ ವಿಚಾರಣೆ ಮಂಗಳವಾರಕ್ಕೆ ನಿಗದಿಯಾಗಿತ್ತು. ಸಾಂವಿಧಾನಿಕ ಪೀಠದ ವಿಚಾರಣೆ ಇರುವುದರಿಂದ ಈ ಪ್ರಕರಣ ಮುಂದೂಡಿಕೆಯಾಗಿದೆ’ ಎಂದರು.
ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸಿದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಈ ಬಗ್ಗೆ ಉತ್ತರ ಕೊಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.