ADVERTISEMENT

ಧರ್ಮಸ್ಥಳ | ವಾಸ್ತವ ತಿಳಿಸುವುದು ಸರ್ಕಾರದ ಉದ್ದೇಶ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2025, 15:43 IST
Last Updated 27 ಸೆಪ್ಟೆಂಬರ್ 2025, 15:43 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಬೆಂಗಳೂರು: ‘ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ರಾಜ್ಯ ಸರ್ಕಾರದ ಉದ್ದೇಶ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

‘ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ’ ಎಂಬ ವೀರೇಂದ್ರ ಹೆಗ್ಗಡೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಹೆಗ್ಗಡೆಯವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮೊದಲೇ ಈ ಕುರಿತು ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥವಿಲ್ಲ’ ಎಂದರು.

ADVERTISEMENT

‘ಎಸ್‌ಐಟಿ ವರದಿ ಬಂದ ನಂತರ ಮುಖ್ಯಮಂತ್ರಿ ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆ ನಂತರ ನಾನು ಮಾತನಾಡುತ್ತೇನೆ’ ಎಂದರು.

‘ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ, ನಾನು ಸರ್ಕಾರದ ಪ್ರತಿನಿಧಿ. ಹೀಗಾಗಿ ಬೇರೆಯವರಂತೆ ಮಾತನಾಡಲು ಬರುವುದಿಲ್ಲ’ ಎಂದೂ ಹೇಳಿದರು.

‘ಸುಪ್ರೀಂ ಕೋರ್ಟಿನಲ್ಲಿ ಪಿಐಎಲ್ ವಜಾ ಆಗಿದ್ದರೂ ಸರ್ಕಾರದ ದಾರಿತಪ್ಪಿಸುವ ಕೆಲಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ’ ಎಂಬ ಪ್ರಶ್ನೆಗೆ, ‘ಈಗ ಆ ವಿಚಾರ ಚರ್ಚೆ ಬೇಡ. ಸುಪ್ರೀಂ ಕೋರ್ಟಿನಲ್ಲಿ ಹಾಕಿದ್ದ ಅರ್ಜಿ ವಜಾಗೊಂಡಿರುವುದು, ಪಿಐಎಲ್ ಹಾಕಿದವರಿಗೆ ಸ್ಥಳೀಯವಾಗಿ ತನಿಖೆ ಮಾಡಲಿ ಎಂದು ಕೋರ್ಟ್ ಬೈದು ಕಳುಹಿಸಿರುವುದು ಎಲ್ಲವೂ ಗೊತ್ತಿದೆ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದ ಬಗ್ಗೆಯೂ ನಮಗೆ ಮಾಹಿತಿ ಇದೆ. ಆದರೆ, ತನಿಖಾ ತಂಡದಿಂದ ಅಧಿಕೃತವಾಗಿ ನಮಗೆ ವರದಿ ಬರಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.