ADVERTISEMENT

ಡಿ.ಕೆ.ಶಿವಕುಮಾರ್ ಅರ್ಜಿ: ಆಕ್ಷೇಪಣೆಗೆ ಸಮಯ ಕೋರಿದ ಸಿಬಿಐ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 5:25 IST
Last Updated 9 ಆಗಸ್ಟ್ 2022, 5:25 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ, ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಸಮಯಾವಕಾಶ ಬೇಕು ಎಂದು ಸಿಬಿಐ ಹೈಕೋರ್ಟ್‌ಗೆ ಮನವಿ ಮಾಡಿದೆ.

ಈ ಸಂಬಂಧ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಅರ್ಜಿ ಅಧ್ಯಯನಕ್ಕೆ ಇನ್ನೂ ಒಂದಿಷ್ಟು ಸಮಯ ಬೇಕು. ಆದ್ದರಿಂದ, ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿದೆ.

ಯಾವುದೀ ಅರ್ಜಿ?: ‘ನನ್ನ ವಿರುದ್ಧ 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ ದಾಖಲಿಸಲಾಗಿರುವ ಎಫ್‌ಐಆರ್‌ ಕಾನೂನು ಬಾಹಿರವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.