ADVERTISEMENT

ಡಿಕೆಶಿ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

ಜಾಮೀನಿಗೆ ಇ.ಡಿ. ವಕೀಲರ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 21:11 IST
Last Updated 1 ಜುಲೈ 2022, 21:11 IST
   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಇತರ ನಾಲ್ವರು ಆರೋಪಿಗಳ ವಿಚಾರಣೆಯನ್ನು ಜುಲೈ 30ಕ್ಕೆಇಲ್ಲಿನ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯ (ಇ.ಡಿ. ನ್ಯಾಯಾಲಯ) ಮುಂದೂಡಿದೆ.

ಶಿವಕುಮಾರ್‌, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್‌ ನಾರಾಯಣ್‌, ಶರ್ಮಾ ಟ್ರಾನ್ಸ್‌ಪೋರ್ಟ್‌ ಮಾಲೀಕ ಸುನೀಲ್‌ ಕುಮಾರ್‌ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್‌. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಷಲ್ಲಿಸಿದ್ದರು.ಈ ವರದಿಯನ್ನು ಮಾನ್ಯ ಮಾಡಿದ ನ್ಯಾಯಾಲಯವು ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಎಲ್ಲ ಆರೋಪಿಗಳಿಗೂ ಸಮನ್ಸ್‌ ಜಾರಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT