ADVERTISEMENT

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ತಡೆ ಆದೇಶ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2023, 22:52 IST
Last Updated 17 ಮಾರ್ಚ್ 2023, 22:52 IST
   

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಇದೇ 24ರವರೆಗೆ ವಿಸ್ತರಿಸಿದೆ.

ಡಿ.ಕೆ.ಶಿವ ಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾ.ಕೆ.ನಟರಾಜನ್ ಪೀಠದಲ್ಲಿ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ನ್ಯಾಯಪೀಠ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆ ಆದೇಶವನ್ನು ವಿಸ್ತರಿಸಿತು. ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. ‘ಈ ಎಫ್‌ಐಆರ್‌ ರದ್ದುಗೊಳಿಸಲು’ ಕೋರಿ ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT