ADVERTISEMENT

ಗಾಳ ಹಾಕಿ ಮೀನು ಹಿಡಿಯುವ ಕಲೆ ಗೊತ್ತು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 13:07 IST
Last Updated 22 ನವೆಂಬರ್ 2025, 13:07 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಗಾಳ ಹಾಕಿ ಮೀನು ಹಿಡಿಯುವ ಕಲೆ ನನಗೆ ಗೊತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. 

ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮೀನುಗಾರಿಕೆ ಇಲಾಖೆ ಆಯೋಜಿಸಿರುವ ಮತ್ಸ್ಯಮೇಳದಲ್ಲಿ ಅವರು ಮಾತನಾಡಿದರು. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ನಡುವೆ ಶಿವಕುಮಾರ್ ಅವರು ಈ ರೀತಿ ಮಾತನಾಡಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ.  

‘ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಬಾಲ್ಯದಲ್ಲಿ ಸಂಗಮಕ್ಕೆ ಹೋಗಿ ಮೀನುಗಳನ್ನು ಹಿಡಿಯುತ್ತಿದ್ದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿಯ ಮೇಲೆ ಇಲ್ಲ. ನೀತಿ, ಛಲ ಹಾಗೂ ಆಸಕ್ತಿಯ ಮೇಲಿದೆ’ ಎಂದು ತಿಳಿಸಿದರು.

ADVERTISEMENT

‘ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತಾರೆ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು’ ಎಂದು ಮಾರ್ಮಿಕವಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.