ಬೆಂಗಳೂರು: ನಾನು ಆರೋಗ್ಯವಾಗಿದ್ದು, ಕೊರೊನಾ ವೈರಸ್ ಸೋಂಕು ತಗುಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ನನಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯಕ್ಕೆ ಸಂಪೂರ್ಣ ದೂರವಾಗಿದೆ’ ಎಂದು ಹೇಳಿದ್ದಾರೆ.
‘ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದ್ದು, ನನಗೆ ಯಾವುದೇ ರೀತಿಯ ಸೋಂಕು ತಗುಲಿಲ್ಲ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುಳ್ಳು ಸುದ್ದಿಗೆ ಯಾರೂ ಕಿವಿಗೊಡಬಾರದು’ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
ಹಾಗೆಯೇ, ರಾಜ್ಯದಲ್ಲಿ ಕೊರೊನಾ ಉಲ್ಬಣವಾಗಿದ್ದು, ಸಾರ್ವಜನಿಕರು ಜಾಗೃತಿ ವಹಿಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.