ADVERTISEMENT

ಡಿ.ಕೆ. ಶಿವಕುಮಾರ್‌ಗೆ ವಿಶೇಷ ವಿನಾಯಿತಿ ಇಲ್ಲ: ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 11:25 IST
Last Updated 11 ಸೆಪ್ಟೆಂಬರ್ 2019, 11:25 IST

ಬೆಳಗಾವಿ: ‘ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡು ಶಾಸಕ, ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಿದ್ದಾರೆ. ಇದನ್ನು ವಿರೋಧಿಸಿ ಒಂದು ಸಮಾಜದವರು ಪ್ರತಿಭಟನೆ ನಡೆಸುತ್ತಿರುವುದು ಹಾಗೂ ಪ್ರಕರಣವನ್ನು ರಾಜಕೀಕರಣಗೊಳಿಸುತ್ತಿರುವುದು ಸರಿಯಲ್ಲ’ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

‘ತಪ್ಪು ಮಾಡಿಲ್ಲವಾದರೆ ಶಿವಕುಮಾರ್‌ ಹೆದರಬೇಕೇಕೆ? ಕಾನೂನು ಹೋರಾಟವನ್ನು ಅವರು ನಡೆಸಲಿ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

‘ಇಡಿಯನ್ನು ನಮ್ಮ ಸರ್ಕಾರ ಮಾಡಿಲ್ಲ. ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದ ಹಲವರನ್ನು ಬಂಧಿಸಲಾಗಿತ್ತು. ಡಿ.ಕೆ. ಶಿವಕುಮಾರ್ ಅವರಿಗೆ ವಿಶೇಷವಾದ ವಿನಾಯಿತಿ ಏನೂ ಇಲ್ಲ. ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಮನೆ ಮೇಲೂ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ಮಾಡಿರಲಿಲ್ಲವೇ?’ ಎಂದು ಕೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.