ADVERTISEMENT

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಆಗಸ್ಟ್ 2025, 11:09 IST
Last Updated 24 ಆಗಸ್ಟ್ 2025, 11:09 IST
   

ಬೆಂಗಳೂರು: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿಯಾಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ‘ಮತ ಅಧಿಕಾರ ಯಾತ್ರೆ’ಯಲ್ಲಿ ಡಿ.ಕೆ.ಶಿವಕುಮಾರ್ ಅವರು ಭಾಗಿಯಾಗಿದ್ದಾರೆ. ಈ ವೇಳೆ ತೇಜಸ್ವಿ ಅವರನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ. ಇದರ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಸಹೋದರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತೋಷದ ವಿಷಯವಾಗಿದೆ. ಮತಗಳ್ಳತನದ ವಿರುದ್ಧದ ಹೋರಾಟದಲ್ಲಿ ಮಹಾಘಟಬಂಧನ್‌ ಒಗ್ಗಟ್ಟಿನಿಂದ ನಿಂತಿದೆ’ ಎಂದು ಡಿಕೆಶಿ ತಿಳಿಸಿದ್ದಾರೆ.

ADVERTISEMENT

‘ಬಿಹಾರದ ಹೃದಯಭಾಗದಿಂದ ನಾವು ನವದೆಹಲಿಗೆ ಸ್ಪಷ್ಟ ಮತ್ತು ಶಕ್ತಿಯುತ ಸಂದೇಶವನ್ನು ಕಳುಹಿಸುತ್ತಿದ್ದೇವೆ. ಜನರ ಆದೇಶವನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.