ADVERTISEMENT

ಡಿ.ಕೆ. ಶಿವಕುಮಾರ್ ಅಕ್ರಮ ಹಣ ಗಳಿಕೆ ಪ್ರಕರಣ: ವಿಚಾರಣೆ ಮುಂದೂಡಿದ ನ್ಯಾಯಾಲಯ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 6:15 IST
Last Updated 27 ಸೆಪ್ಟೆಂಬರ್ 2022, 6:15 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್    

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಇತರ ನಾಲ್ವರು ಆರೋಪಿಗಳು ಭಾಗಿಯಾಗಿರುವಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನುಇಲ್ಲಿನ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯ (ಇ.ಡಿ. ನ್ಯಾಯಾಲಯ) ಅಕ್ಟೋಬರ್‌ 18ಕ್ಕೆ ಮುಂದೂಡಿದೆ.

ರಾಜಕೀಯ ಕಾರ್ಯಕ್ರಮಗಳ ಕಾರಣ ನೀಡಿ ಶಿವಕುಮಾರ್ ಅವರು ಹಾಜರಾತಿಯಿಂದ ವಿನಾಯಿತಿ ಪಡೆದಿದ್ದರು. ಉಳಿದ ನಾಲ್ವರು ಆರೋಪಿಗಳು ವಿಚಾರಣೆಗೆ ಹಾಜರಾದರು.

ಶಿವಕುಮಾರ್‌, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್‌ ನಾರಾಯಣ್‌, ಶರ್ಮಾ ಟ್ರಾನ್ಸ್‌ಪೋರ್ಟ್‌ ಮಾಲೀಕ ಸುನೀಲ್‌ ಕುಮಾರ್‌ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್‌. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು. ಈ ವರದಿಯನ್ನು ಮಾನ್ಯ ಮಾಡಿದ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಎಲ್ಲ ಆರೋಪಿಗಳಿಗೂ ಸಮನ್ಸ್‌ ಜಾರಿ ಮಾಡಿತ್ತು.ಐವರು ಆರೋಪಿಗಳಿಗೆ ನ್ಯಾಯಾಲಯವು ಆಗಸ್ಟ್‌ 2ರಂದು ಜಾಮೀನು ನೀಡಿತ್ತು.

ADVERTISEMENT

2017ರಲ್ಲಿ ಶಿವಕುಮಾರ್‌ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದರು. ಆಗ, ದೆಹಲಿಯ ವಿವಿಧ ಸ್ಥಳಗಳಲ್ಲಿ ₹ 8.59 ಕೋಟಿ ನಗದು ವಶಕ್ಕೆ ಪಡೆಯಲಾಗಿತ್ತು. ಬಳಿಕ ಶಿವಕುಮಾರ್‌ ಅವರನ್ನು ಬಂಧಿಸಲಾಯಿತು. ನಂತರ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು.ಎಲ್ಲ ಆರೋಪಿಗಳಿಗೆ ದೆಹಲಿ ಹೈಕೋರ್ಟ್‌ ಈ ಹಿಂದೆ ಮಧ್ಯಂತರ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.