ADVERTISEMENT

ಗೋಕರ್ಣಕ್ಕೆ ಡಿ.ಕೆ.ಶಿವಕುಮಾರ್ ಭೇಟಿ: ಆತ್ಮಲಿಂಗಕ್ಕೆ ಪೂಜೆ 

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2019, 10:52 IST
Last Updated 22 ನವೆಂಬರ್ 2019, 10:52 IST
ಗೋಕರ್ಣಕ್ಕೆ ಶುಕ್ರವಾರ ಭೇಟಿ ನೀಡಿದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್, ಮಹಾಗಣಪತಿ ದೇವರಿಗೆ ಪೂಜೆ ಸಲ್ಲಿಸಿದರು.
ಗೋಕರ್ಣಕ್ಕೆ ಶುಕ್ರವಾರ ಭೇಟಿ ನೀಡಿದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್, ಮಹಾಗಣಪತಿ ದೇವರಿಗೆ ಪೂಜೆ ಸಲ್ಲಿಸಿದರು.   

ಗೋಕರ್ಣ: ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್, ಇಲ್ಲಿನ ಮಹಾಗಣಪತಿ, ಮಹಾಬಲೇಶ್ವರ ಮತ್ತು ಪಾರ್ವತಿ ದೇವರಿಗೆಶುಕ್ರವಾರ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಾನು ಕಷ್ಟದ ಸಮಯದಲ್ಲಿದ್ದಾಗ ನನ್ನ ಅಭಿಮಾನಿಗಳು ಹಿತೈಷಿಗಳು ದೇವರಲ್ಲಿ ನನ್ನ ಬಗ್ಗೆ ಹರಕೆ ಹೊತ್ತಿದ್ದರು.ಅದನ್ನು ಈಡೇರಿಸಲು ದೇವರಲ್ಲಿ ಪೂಜೆ ಸಲ್ಲಿಸಲು ಬಂದಿದ್ದೇನೆ. ಮಹಾಬಲೇಶ್ವರ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ’ ಎಂದು ಹಾರೈಸಿದರು.

ಮುಖ್ಯ ಪುರೋಹಿತ ರಾಜಗೋಪಾಲ ಅಡಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಎಲ್ಲ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು. ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕ, ಹಿಂದುಳಿದ ವೇದಿಕೆಯ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಸದಸ್ಯರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.