ADVERTISEMENT

ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 22:31 IST
Last Updated 3 ಮಾರ್ಚ್ 2026, 22:31 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

   

ಪ್ರಜಾವಾಣಿ ಚಿತ್ರ

ಬೆಂಗಳೂರು: ‘ನನ್ನ ಮತ್ತು ಮುಖ್ಯಮಂತ್ರಿ ನಡುವಿನ ಸಂಬಂಧ ಖಂಡಿತ ಹಾಲು ಜೇನಿನ ಸಂಬಂಧ. 2023ರ ಚುನಾವಣೆ ಮಾತ್ರವಲ್ಲ, 2028ರ ಚುನಾವಣೆಯಲ್ಲೂ ಹೀಗೆ ಇರಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

‘ನಮ್ಮ ಮಧ್ಯೆ ಹುಳಿ ಹಿಂಡಿ ಶಿವಕುಮಾರ್‌ನನ್ನು ಒಲಿಸಿಕೊಳ್ಳುವ ದುರಾಲೋಚನೆ ಬೇರೆ ಯಾರಿಗಾದರೂ ಇದ್ದರೆ, ಅದು ಹಗಲುಗನಸು’ ಎಂಬ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಅದು ಅವರ ಅನುಭವದ ಮಾತು. ಅವರು ನನ್ನನ್ನು ನೋಡಿದ್ದಾರೆ. ಅವರು ಬೇರೆ ಪಕ್ಷದಲ್ಲಿದ್ದಾಗಲೂ ನನ್ನನ್ನು ನೋಡಿದ್ದಾರೆ. ನಮ್ಮ ಪಕ್ಷಕ್ಕೆ ಬಂದ ನಂತರವೂ ಬಹಳ ಹತ್ತಿರದಿಂದ ನೋಡಿದ್ದಾರೆ. ನಾನು ಏನು ಎಂಬುದು ಅವರಿಗೆ ಗೊತ್ತಿದೆ’ ಎಂದರು.

‘ನಿಮ್ಮನ್ನು ಒಲಿಸಿಕೊಳ್ಳಲು ಬಿಜೆಪಿ–ಜೆಡಿಎಸ್‌ ಪ್ರಯತ್ನ ನಡೆಸಿವೆಯೇ’ ಎಂಬ ಪ್ರಶ್ನೆಗೆ, ‘ಮುಂದೊಂದು ದಿನ ಪುಸ್ತಕ ಬರೆದರೆ ಈ ಬಗ್ಗೆ ವಿವರಿಸುವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.