
ಬೆಂಗಳೂರು: ‘ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪಕ್ಷದ ಕಚೇರಿಯನ್ನು ಕಡ್ಡಾಯವಾಗಿ ನಿರ್ಮಿಸಬೇಕು’ ಎಂದು ಪಕ್ಷದ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದರು.
ಅರಮನೆ ಮೈದಾನದಲ್ಲಿ ಕೆಪಿಸಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಕ್ಷದ ನಾಯಕರು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಿಂದ ನಿಧಿ ಸಂಗ್ರಹಿಸಿ, ಕಾರ್ಯಕರ್ತರಿಂದ ದೇಣಿಗೆ ಪಡೆದು ಕಚೇರಿ ಕಟ್ಟಡ ನಿರ್ಮಿಸಬೇಕು. ಕಟ್ಟಡದ ನಿರ್ಮಾಣ ಒಂದು ಹಂತಕ್ಕೆ ಬಂದ ನಂತರ ಕೆಪಿಸಿಸಿಯಿಂದ ಆರ್ಥಿಕ ನೆರವು ನೀಡಲಾಗುವುದು’ ಎಂದರು.
‘ಕೋನರಡ್ಡಿ, ಶರಣಪ್ರಕಾಶ್ ಪಾಟೀಲ, ಎಂ.ಸಿ. ಸುಧಾಕರ್, ಉದಯ್, ಸಿರಗುಪ್ಪ ನಾಗರಾಜ್ ಸೇರಿದಂತೆ 22 ಮಂದಿ ಕಾಂಗ್ರೆಸ್ ಭವನಕ್ಕೆ ಬೇಕಾದ ಜಾಗವನ್ನು ಪಕ್ಷದ ಹೆಸರಿಗೆ ಬರೆದುಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ದಿನ ನೀಡಿದ ಬಳಿಕ ನೂತನ ಕಾಂಗ್ರೆಸ್ ಕಚೇರಿಗಳಿಗೆ ಬೆಂಗಳೂರಿನಿಂದ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಾಗುವುದು’ ಎಂದರು.
ಎಸ್‌ಐಆರ್ ಎಚ್ಚರ:
‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ಬೂತ್‌ಮಟ್ಟದ ಏಜೆಂಟರು ಮತದಾರರ ರಕ್ಷಣೆ ಮಾಡಲು ಎಚ್ಚರಿಕೆಯಿಂದ ಇರಬೇಕು’ ಎಂದರು.
ಚುನಾವಣೆಗೆ ಸಿದ್ಧರಾಗಿ:
‘ನಾಲ್ಕೈದು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಪಕ್ಷದ ಕಾರ್ಯಕರ್ತರು ಸಿದ್ಧರಾಗಬೇಕು’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.