ಡಿಕೆಶಿ
ಬೆಂಗಳೂರು: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆರೋಪ ಹೊತ್ತ ಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರಾ? ಮೊದಲು ಅವರು ರಾಜೀನಾಮೆ ನೀಡಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಹೇಳಿದರು.
ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಅಧಿಕಾರಿಗಳು ತಪ್ಪು ಮಾಡಿರಲೂಬಹುದು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ’ ಎಂದರು.
‘ನ್ಯಾಯಾಲಯದ ಸೂಚನೆಯಂತೆ ತನಿಖೆ ನಡೆಯಲಿದೆ. ಯಾವುದೇ ತನಿಖೆ ನಡೆದರೂ ಸಿದ್ದರಾಮಯ್ಯ ದೊಷಮುಕ್ತರಾಗಿ ಹೊರಬರುವ ವಿಶ್ವಾಸವಿದೆ’ ಎಂದರು.
‘ಸಿದ್ದರಾಮಯ್ಯ ಪ್ರಕರಣವನ್ನು ರಾಜಕೀಯ ಕಾರಣಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ನಮಗೆ ಕಾನೂನಿನ ಮೇಲೆ ನಂಬಿಕೆ ಇದೆ. ಆರೋಪಮುಕ್ತರಾಗಿ ಹೊರಬರುತ್ತಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.