ಬೆಂಗಳೂರು: ರಾಜಕೀಯ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ವಿಚಾರ ಕಾಂಗ್ರೆಸ್ –ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ವಿಚಾರವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್‌ಗೆ ಬಿಜೆಪಿಯ ನೈತಿಕತೆ ಬಗ್ಗೆ ಮಾತಾಡುವ ಹಕ್ಕಿಲ್ಲ’ ಎಂದು ಕಿಡಿಕಾರಿದೆ.
‘ಕಾಂಗ್ರೆಸ್‌ನ ಮುನ್ನೆಲೆಯ ನಾಯಕರೇ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವಂತಾಗಿದ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.