
ಡಿ.ಕೆ.ಶಿವಕುಮಾರ್
ಹಾವೇರಿ: ‘ಮುಂಬರುವ 2028ರ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 141 ಸೀಟುಗಳು ಬರಲಿವೆ. ಎಲ್ಲರೂ ಇದನ್ನು ಬರೆದಿಟ್ಟುಕೊಳ್ಳಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನಾ ಸಮಾವೇಶ’ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಜಿಲ್ಲೆಯ ಜನರು ಕಾಂಗ್ರೆಸ್ ಪಕ್ಷವನ್ನು ಮೆಚ್ಚಿ ಆರು ಶಾಸಕರನ್ನು ನಮಗೆ ಕೊಟ್ಟಿದ್ದಾರೆ. ಅವರಿಗೆ ಕೋಟಿ ನಮನ ಸಲ್ಲಿಸುವುದಕ್ಕಾಗಿ ಹಾವೇರಿ ಜಿಲ್ಲೆಯಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ. ಇದೊಂದು ಐಸಿಹಾಸಿಕ ಕಾರ್ಯಕ್ರಮ’ ಎಂದರು.
‘ಈ ಬಾರಿ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು. ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ. ನನಗೆ ನಮ್ಮ ಶಾಸಕರಿಗೆ ಆತ್ಮವಿಶ್ವಾಸವಿದೆ ಎಂದರು.
3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಎರಡು ಕಡೆ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ಆ ಕ್ಷೇತ್ರಗಳು ನಮ್ಮ ಬಳಿ ಇರಲಿಲ್ಲ. ಆ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ನೀಡಿ ನಮ್ಮ ಸಂಖ್ಯಾಬಲವನ್ನು 139ಕ್ಕೆ ಏರಿಕೆ ಮಾಡಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದ. ನಿಮ್ಮ ಈ ಋಣ ತೀರಿಸಲು ಈ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.