ಡಿ.ಕೆ ಶಿವಕುಮಾರ್
- ಪ್ರಜಾವಾಣಿ ಚಿತ್ರ
ಬೆಂಗಳೂರು: ‘ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್‌ನಿಂದ ಹಲ್ಲೆಗೆ ಒಳಗಾಗಿರುವ ಕನ್ನಡಿಗ ವಿಕಾಸ್ ಕುಮಾರ್ ಅವರಿಗೆ ನ್ಯಾಯ ಸಿಗುವಂತೆ ಮಾಡಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿಕಾಸ್ ಕುಮಾರ್‌ಗೆ ಬುಧವಾರ ಕರೆ ಮಾಡಿ ಮಾತನಾಡಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ನಾಗವಾರಪಾಳ್ಯದ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ವಿಕಾಸ್ ಕುಮಾರ್‌ಗೆ ಧೈರ್ಯ ತುಂಬಿದ್ದೇನೆ. ಕನ್ನಡಿಗರು ಸಮಸ್ಯೆಯಲ್ಲಿದ್ದರೆ ಕರ್ನಾಟಕ ಸರ್ಕಾರ ಜೊತೆ ನಿಲ್ಲಲಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಲೂ ಬದ್ಧರಿದ್ದೇವೆ. ಯಾವುದಕ್ಕೂ ಹೆದರುವ ಅಗತ್ಯವಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.