ADVERTISEMENT

ಪ್ರಜ್ವಲ್‌ ರೇವಣ್ಣ ಪ್ರಕರಣ | ಬಿಜೆಪಿ ನಾಯಕರು ಮೌನವೇಕೆ?: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 16:06 IST
Last Updated 2 ಆಗಸ್ಟ್ 2025, 16:06 IST
<div class="paragraphs"><p>ಡಿ.ಕೆ ಶಿವಕುಮಾರ್</p></div>

ಡಿ.ಕೆ ಶಿವಕುಮಾರ್

   

ನವದೆಹಲಿ: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. 

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಈ ಪ್ರಕರಣದ ಬಗ್ಗೆ ಬಿ.ವೈ. ವಿಜಯೇಂದ್ರ, ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ ಏಕೆ ಮಾತನಾಡುತ್ತಿಲ್ಲ. ಹೆಣ್ಣು ಮಕ್ಕಳ ರಕ್ಷಕ ಸಿ.ಟಿ. ರವಿ ಸುಮ್ಮನಿರುವುದು ಏಕೆ’ ಎಂದು ಕೇಳಿದರು. 

ADVERTISEMENT

‘ನನ್ನ ಪ್ರತಿಕ್ರಿಯೆ ಕೇಳುವುದಕ್ಕಿಂತ ಮೈತ್ರಿ ನಾಯಕರನ್ನೇ ಕೇಳಿ. ಅವರಿಗೆ ಸೂಕ್ತ ಉತ್ತರ ಕೊಡುವ ಶಕ್ತಿ ಹಾಗೂ ಸಾಮರ್ಥ್ಯ ಇದೆ’ ಎಂದು ಅವರು ವ್ಯಂಗ್ಯವಾಗಿ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.