ADVERTISEMENT

ಐಟಿ ಇಲಾಖೆ ಕುಮಾರಸ್ವಾಮಿ ಜೇಬಲ್ಲೇ ಇದೆಯಲ್ಲ: ಡಿ.ಕೆ. ಶಿವಕುಮಾರ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 16:03 IST
Last Updated 6 ಜನವರಿ 2026, 16:03 IST
<div class="paragraphs"><p>ಡಿ.ಕೆ. ಶಿವಕುಮಾರ್ ಹಾಗೂ ಎಚ್‌ಡಿ ಕುಮಾರಸ್ವಾಮಿ</p></div>

ಡಿ.ಕೆ. ಶಿವಕುಮಾರ್ ಹಾಗೂ ಎಚ್‌ಡಿ ಕುಮಾರಸ್ವಾಮಿ

   

ಬೆಂಗಳೂರು: ‘ಆದಾಯ ತೆರಿಗೆ (ಐಟಿ) ಸೇರಿದಂತೆ ಎಲ್ಲ ಇಲಾಖೆಗಳು ವಿರೋಧ ಪಕ್ಷಗಳ ಹತ್ತಿರವೇ ಇದೆಯಲ್ಲವೇ? ಕುಮಾರಸ್ವಾಮಿಯವರ ಜೇಬಿನಲ್ಲೇ ಇವೆಯಲ್ಲವೇ?’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಬಳ್ಳಾರಿಯಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಮೊತ್ತ ಕಾಂಗ್ರೆಸ್ ಪಕ್ಷದ್ದೊ, ಸರ್ಕಾರದಿಂದಲೊ? ಐಟಿ ಇಲಾಖೆ ಏನು ಮಾಡುತ್ತಿದೆ’ ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದರು.

ADVERTISEMENT

ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಪರಿಹಾರವಾಗಿ ನೀಡಿರುವ ಹಣದ ಬಗ್ಗೆ ಸಚಿವ ಜಮೀರ್ ಜೊತೆ ಮಾತನಾಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.