ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಕಳಿಸೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಉತ್ತಮವಾಗಿದೆ. ಅಲ್ಲಿಗೆ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸಿ ಉತ್ತಮ ಚಿಕಿತ್ಸೆ ಕೊಡಿಸೋಣ’ ಎಂದರು.
ಬೆಂಗಳೂರು ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆ, ಮೇಲು ಸೇತುವೆ ರಸ್ತೆ ನಿರ್ಮಾಣ ಸಂಬಂಧ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆ ಚರ್ಚೆ ಮಾಡುವುದಾಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.