ADVERTISEMENT

ಸಿಎಂ ಆಸೆ ಎಲ್ಲರಿಗೂ ಇದೆ; ಕಾಲವೇ ಉತ್ತರಿಸುತ್ತೆ: ಡಿ.ಕೆ. ಶಿವಕುಮಾರ್‌

ಮಂಗಳೂರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 5:14 IST
Last Updated 7 ಫೆಬ್ರುವರಿ 2026, 5:14 IST
<div class="paragraphs"><p>ಡಿ.ಕೆ. ಶಿವಕುಮಾರ್‌</p></div>

ಡಿ.ಕೆ. ಶಿವಕುಮಾರ್‌

   

ಮಂಗಳೂರು: ‘ನಾನು ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದರು.

ಬೆಂಗಳೂರಿಗೆ ತೆರಳುವ ಮುನ್ನ ಶನಿವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ..’ ಎಂಬ ಪ್ರಶ್ನೆಗೆ ಹೀಗೆ ಹೇಳಿದರು.

ADVERTISEMENT

ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ, ‘ಸಮಯವೇ ಉತ್ತರ ನೀಡಲಿದೆ’ ಎಂದರು.

ಚಿಕ್ಕಮಗಳೂರಲ್ಲಿ ದಲಿತ ಸಂಘಟನೆಗಳು ಗೃಹ ಸಚಿವ ಜಿ.ಪರಮೇಶ್ವರ ಅವರು ಸಿಎಂ ಆಗಬೇಕು ಎಂದು ಘೋಷಣೆ ಕೂಗಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ’ ಎಂದರು.

ಮೆಟ್ರೊ ದರ ಏರಿಕೆ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ:

ಮೆಟ್ರೊ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೊ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಶಿವಕುಮಾರ್ ಹೇಳಿದರು.

‘ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.