ಬೆಂಗಳೂರು: ರಾಮನಗರ ಮತ್ತು ಕನಕಪುರಕ್ಕೆ ಮಾತ್ರ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಟೀಕಿಸಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ಶಿವಕುಮಾರ್ ರಾಜ್ಯದ ಉಪಮುಖ್ಯಮಂತ್ರಿಯಂತೆ ನಡೆದುಕೊಳ್ಳುತ್ತಿಲ್ಲ. ತುಮಕೂರಿನಲ್ಲಿ ನೀರಿನ ಕೊರತೆ ಇರುವಾಗ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಇದು ಅನ್ಯಾಯ. ಸಚಿವರಾದ ಕೆ.ಎನ್. ರಾಜಣ್ಣ, ಜಿ. ಪರಮೇಶ್ವರ ಅವರಿಗೂ ತುಮಕೂರಿನ ಜನರ ಬಗ್ಗೆ ಕಾಳಜಿ ಇಲ್ಲ. ಅಷ್ಟೊಂದು ಅಸಹಾಯಕರಾಗುವ ಬದಲು ಇಬ್ಬರೂ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡುವುದು ಒಳ್ಳೆಯದು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಇರುವಾಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಒಳಗೊಂಡ ಅನುಷ್ಠಾನ ಸಮಿತಿಯ ಅಗತ್ಯವೇನು? ಲೂಟಿಕೋರ ರಾಜ್ಯ ಸರ್ಕಾರದ ವಿರುದ್ಧ ಜನರು ಬೀದಿಗಿಳಿಯುವ ದಿನ ಶೀಘ್ರ ಬರಲಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.