ADVERTISEMENT

ಪಾದಯಾತ್ರೆ ಜನರದ್ದು, ನಾನೇ ಇರಬೇಕೆಂದಿಲ್ಲ, ಇಡಿ ವಿಚಾರಣೆ ಎದುರಿಸುವೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 14:55 IST
Last Updated 6 ಅಕ್ಟೋಬರ್ 2022, 14:55 IST
ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್‌
ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್‌   

ಮಂಡ್ಯ: ‘ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್‌ ನೀಡಿದ್ದು ನಾನು ಶುಕ್ರವಾರ ದೆಹಲಿಯಲ್ಲಿ ವಿಚಾರಣೆ ಎದುರಿಸುತ್ತೇನೆ’ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್‌ ಗುರುವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಾಜ್ಯದಲ್ಲಿ ಭಾರತ್‌ ಜೋಡೊ ಯಾತ್ರೆ ನಡೆಯುತ್ತಿರುವ ಕಾರಣ ಮಾನವೀಯತೆ ದೃಷ್ಟಿಯಿಂದ ವಿಚಾರಣೆಗೆ ಹಾಜರಾಗಲು ಸಮಯ ನೀಡಬೇಕು ಎಂದು ಇಡಿಗೆ ಮನವಿ ಮಾಡಿದ್ದೆ. ಆದರೆ ಗುರುವಾರ ಮತ್ತೊಂದು ನೋಟಿಸ್‌ ಬಂದಿದ್ದು ಅವಕಾಶ ನೀಡಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದೇನೆ. ನಮ್ಮ ಪಕ್ಷದ ಹಿರಿಯ ಮುಖಂಡರು ಕೂಡ ಹಾಜರಾಗಲು ತಿಳಿಸಿದ್ದಾರೆ’ ಎಂದರು.

‘ರಾಜ್ಯದಲ್ಲಿ ನಡೆಯುತ್ತಿರುವ ಪಾದಯಾತ್ರೆ ಜನರ ಯಾತ್ರೆಯಾಗಿದೆ, ಇದನ್ನು ಜನರೇ ನಡೆಸುತ್ತಾರೆ. ನಾನೇ ಸ್ಥಳದಲ್ಲಿ ಇರಬೇಕು ಎಂದೇನಿಲ್ಲ, ಸಕಲ ವ್ಯವಸ್ಥೆಯನ್ನು ನಮ್ಮ ಮುಖಂಡರು ನೋಡಿಕೊಳ್ಳುತ್ತಾರೆ. ಹೀಗಾಗಿ ವಿಚಾರಣೆಗೆ ತೆರಳಲು ನಾನು ಮತ್ತು ಡಿ.ಕೆ.ಸುರೇಶ್‌ ಗುರುವಾರ ರಾತ್ರಿಯೇ ದೆಹಲಿಗೆ ತೆರಳುತ್ತಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.