ADVERTISEMENT

ಶಿವರಾತ್ರಿ ನಂತರ ಶುಭವಾಗಲಿದೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 13:22 IST
Last Updated 13 ಫೆಬ್ರುವರಿ 2026, 13:22 IST
   

ತಿಪಟೂರು: ಶಿವರಾತ್ರಿ ಹಬ್ಬದ ನಂತರ ಶುಭವಾಗಲಿದೆ. ಎಲ್ಲರಿಗೂ ಒಳ್ಳೆಯದಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ತಾಲ್ಲೂಕಿನ ಕಾಡಸಿದ್ದೇಶ್ವರ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಜತೆಗೆ ಏನೆಲ್ಲ ಮಾತುಕತೆ ನಡೆಯಿತು ಎಂಬ ಪ್ರಶ್ನೆಗೆ ಚುಟುಕಾಗಿ ಪ್ರತಿಕ್ರಿಯಿಸಿದರು.

‘ಮುಂದೆ ಏನಾಗುತ್ತದೆ ಎಂಬ ಬಗ್ಗೆ ಚರ್ಚಿಸುವುದಿಲ್ಲ. ಏನು ಮಾಡಬೇಕು ಎಂದು ಚಿಂತಿಸುತ್ತೇನೆ’ ಎಂದರು.

ADVERTISEMENT

‘ಅಜ್ಜಯ್ಯ ಅವರೊಂದಿಗೆ ವಿಶೇಷ ಸಂಬಂಧವಿದೆ. ಈ ಕ್ಷೇತ್ರದ ಶಕ್ತಿ ಎಲ್ಲರಿಗೂ ಗೊತ್ತಿದೆ. ಇದೇ ಶಕ್ತಿ, ಅಜ್ಜಯನ ಆಶೀರ್ವಾದದಿಂದ ನಮ್ಮ ಸರ್ಕಾರ ಸ್ಥಾಪನೆಯಾಗಿ, ಮುಂದುವರಿದಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.