ADVERTISEMENT

ಹೈಕಮಾಂಡ್‌ ಕರೆದಾಗ ದೆಹಲಿಗೆ ಹೋಗುತ್ತೇವೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 15:46 IST
Last Updated 22 ಫೆಬ್ರುವರಿ 2026, 15:46 IST
<div class="paragraphs"><p>ಡಿ.ಕೆ ಶಿವಕುಮಾರ್</p></div>

ಡಿ.ಕೆ ಶಿವಕುಮಾರ್

   

ಬೆಂಗಳೂರು: ‘ಅವರು (ಹೈಕಮಾಂಡ್‌) ಯಾವಾಗ ಕರೆಯುತ್ತಾರೊ ಆಗೆಲ್ಲಾ ದೆಹಲಿಗೆ ಹೋಗುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಮುಂದಿನ ವಾರ ದೆಹಲಿಗೆ ಹೋಗುತ್ತೀರಾ’ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

ADVERTISEMENT

‘ನಾನು ದೆಹಲಿಗೆ ಹೋಗುವುದು, ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ’ ಎಂದೂ ಶಿವಕುಮಾರ್ ಪ್ರಶ್ನಿಸಿದರು.

‘ಅಸ್ಸಾಂಗೆ ಹೋಗಿದ್ದಾಗ ಪ್ರಿಯಾಂಕಾ ಗಾಂಧಿ ಜೊತೆ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದೀರಾ’ ಎಂದು ಕೇಳಿದಾಗ, ‘ರಾಜ್ಯ ರಾಜಕೀಯದ ಬಗ್ಗೆ ಎಲ್ಲೆಂದರಲ್ಲಿ ನಾನು ಚರ್ಚೆ ಮಾಡುವುದಿಲ್ಲ. ಅದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವೂ ಅಲ್ಲ’ ಎಂದರು.

ದೇಶದ ಹಿತಕ್ಕಾಗಿ ರಾಹುಲ್ ಗಾಂಧಿ ಧ್ವನಿ: ಅಮೆರಿಕ ವಿಧಿಸಿರುವ ತೆರಿಗೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಾಹುಲ್ ಗಾಂಧಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, ‘ರಾಹುಲ್ ಗಾಂಧಿ ‌ದೇಶದ ಹಿತಕ್ಕಾಗಿ ಏನು ಬೇಕೊ ಅದನ್ನು ಮಾಡುತ್ತಾರೆ, ಮಾತನಾಡುತ್ತಾರೆ. ಅಮೆರಿಕದ ಜೊತೆಗಿನ ತೆರಿಗೆ ಒಪ್ಪಂದದಿಂದ ದೇಶದ ಪ್ರತಿ ರೈತನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಚರ್ಚೆ ಮಾಡುತ್ತಾರೆ’ ಎಂದರು.

ನರೇಗಾ ಬಚಾವ್ ಸಮಾವೇಶ: ‘ನರೇಗಾ ಉಳಿಸಿ ಸಮಾವೇಶ ಚಿಕ್ಕಬಳ್ಳಾಪುರದಲ್ಲಿ ಸೋಮವಾರ (ಫೆ. 23) ಹಮ್ಮಿಕೊಂಡಿದ್ದೇವೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನರೇಗಾ ರಕ್ಷಣೆಗೆ ಆಗ್ರಹಿಸಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲಾಗಿದೆ. ಬಾಕಿ ಇರುವ ಕ್ಷೇತ್ರಗಳಲ್ಲೂ ಮಾಡುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.