ಡಿ.ಕೆ ಶಿವಕುಮಾರ್
ಫೇಸ್‌ಬುಕ್ ಚಿತ್ರ
ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ.
ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಪ್ರಮಾಣಪತ್ರಗಳನ್ನು ವಿಶ್ಲೇಷಿಸಿ ಎಡಿಆರ್ ಗುರುವಾರ ವರದಿ ಬಿಡುಗಡೆ ಮಾಡಿದೆ. 27 ವಿಧಾನಸಭೆಗಳು, 3 ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ 652 ಸಚಿವರ ಪೈಕಿ 643 ಸಚಿವರು ಸಲ್ಲಿಸಿರುವ ಪ್ರಮಾಣಪತ್ರಗಳನ್ನು ವಿಶ್ಲೇಷಿಸಲಾಗಿದೆ.
ಕರ್ನಾಟಕದಲ್ಲಿ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರು ಇದ್ದಾರೆ. ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ.
643 ಸಚಿವರ ಪೈಕಿ 302 ಮಂದಿ (ಶೇ 47) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. 174 ಸಚಿವರ ವಿರುದ್ಧ (ಶೇ 27) ಗಂಭೀರ ಅಪರಾಧ ಪ್ರಕರಣಗಳಿವೆ. ಈ ಸಚಿವರು ಕೊಲೆ, ಕೊಲೆಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (ಶೇ 40) ಮಂದಿ ವಿರುದ್ಧ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.