
ಡಿಕೆಶಿ
ನವದೆಹಲಿ: ಕರ್ನಾಟಕದ ಜಲವಿವಾದಗಳ ತ್ವರಿತ ವಿಚಾರಣೆಗೆ ವಿಶೇಷ ಪೀಠ ರಚನೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.
ರಾಜ್ಯದ ಜಲವಿವಾದಗಳ ಕುರಿತು ಸಮರ್ಥ ವಾದ ಮಂಡನೆ ಮಾಡುವ ಸಂಬಂಧ ಕಾನೂನು ತಜ್ಞರು ಹಾಗೂ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕರ್ನಾಟಕ ಭವನದಲ್ಲಿ ಬುಧವಾರ ರಾತ್ರಿ ಸಭೆ ನಡೆಸಿದರು.
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿ, ‘ಸಭೆಯಲ್ಲಿ ಮೇಕೆದಾಟು, ಕೃಷ್ಣಾ, ಮಹದಾಯಿ ಜಲವಿವಾದಗಳ ಕುರಿತು ಚರ್ಚೆ ನಡೆಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸಲು ನಿರ್ದೇಶನ ನೀಡಲಾಗಿದೆ‘ ಎಂದರು.
ಜಲವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಬಿಜೆಪಿ ಸಂಸದರು ಚಕಾರ ಎತ್ತುತ್ತಿಲ್ಲ. ಹೀಗಾಗಿ ರಾಜಕೀಯ ಒತ್ತಡ ಹೇರಲು ಆಗಿಲ್ಲ ಎಂದರು.
‘ರಾಷ್ಟ್ರೀಯ ನಾಯಕರ ಭೇಟಿ ಇಲ್ಲ‘
ನಾನು ಹೈಕಮಾಂಡ್‌ನ ಯಾವುದೇ ನಾಯಕರನ್ನು ಭೇಟಿ ಮಾಡುವುದಿಲ್ಲ. ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರೀಯ ನಾಯಕರು ನಿರ್ದೇಶನ ನೀಡಿದರೆ ಪಾಲಿಸುತ್ತೇನೆ ಎಂದರು.
ಮತ ಕಳವು ಬಗ್ಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಎಲ್ಲ ರಾಜ್ಯ ಘಟಕಗಳ ಅಧ್ಯಕ್ಷರ ಜತೆಗೆ ಸಭೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆದಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.