ADVERTISEMENT

ಪರಿಷತ್‌ ಚುನಾವಣೆ | ಅನುಭವಿಗಳೇ ಬೇಕು ಎಂಬ ಕಾರಣಕ್ಕೆ ಈ ಆಯ್ಕೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 8:19 IST
Last Updated 18 ಜೂನ್ 2020, 8:19 IST
 ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್ ಹಾಗೂ ನಾಸೀರ್ ಅಹಮದ್ ಅವರಿಗೆ ಬಿ ಫಾರ್ಮ್ ನೀಡಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್ ಹಾಗೂ ನಾಸೀರ್ ಅಹಮದ್ ಅವರಿಗೆ ಬಿ ಫಾರ್ಮ್ ನೀಡಿದರು.   

ಬೆಂಗಳೂರು: ವಿಧಾನ ಪರಿಷತ್ ಎಂದರೆ ಅದು ಹಿರಿಯರ ಮನೆ. ಅಲ್ಲಿಗೆ ಅನುಭವಿಗಳೇ ಬೇಕು ಎಂಬ ಕಾರಣಕ್ಕೆ ಬಿ.ಕೆ.ಹರಿಪ್ರಸಾದ್ ಮತ್ತು ಹಾಲಿ ಸದಸ್ಯ ನಸೀರ್ ಅಹಮದ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷದ ಕಚೇರಿಯಲ್ಲಿ ಗುರುವಾರ ಇಬ್ಬರಿಗೂ ಬಿ ಫಾರಂ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೆಲವು ಹಿಂದುಳಿದ ಸಮುದಾಯ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಯಕರ ನಿವೃತ್ತಿಯ ಕಾರಣ ಹಾಗೂ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಈ ಆಯ್ಕೆ ಮಾಡಲಾಗಿದೆ. ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ ಸಹಿತ ಇತರ ಚುನಾವಣೆಗಳಲ್ಲಿ ಪಕ್ಷದ ಯುವ ಮತ್ತು ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT