ADVERTISEMENT

ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ: ಕುತೂಹಲ ಮೂಡಿಸಿದ ಡಿಕೆಶಿ ಪೋಸ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ನವೆಂಬರ್ 2025, 6:31 IST
Last Updated 27 ನವೆಂಬರ್ 2025, 6:31 IST
Shwetha Kumari
   Shwetha Kumari

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರದ ಗುದ್ದಾಟದ ನಡುವೆಯೇ ಉಪಮಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ’ ಎಂಬ ಪೋಸ್ಟ್‌ ಕುತೂಹಲ ಮೂಡಿಸಿದೆ.

‘ಜಗತ್ತಿನ ಅತಿದೊಡ್ಡ ಶಕ್ತಿ ಎಂದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ, ನಾನಾಗಲಿ, ಬೇರೆ ಯಾರೇ ಆಗಿರಲಿ ಎಲ್ಲರೂ ನುಡಿದಂತೆ ನಡೆಯಬೇಕು. ಮಾತು ಉಳಿಸಿಕೊಳ್ಳುವುದು ಮುಖ್ಯ’ ಎಂದು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿದ್ದಂತೆ ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನರ್ ರಚನೆ ಚರ್ಚೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಬಣಗಳ ನಡುವೆ ಜಟಾಪಟಿ ಜೋರಾಗಿದ್ದು, ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಚಳಿಗಾಲದ ಅಧಿವೇಶನದ ಪ್ರಾರಂಭಕ್ಕೂ ಮೊದಲು ಗೊಂದಲ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ADVERTISEMENT

ಸ್ವತಃ ರಾಹುಲ್ ಗಾಂಧಿ ಅವರೇ ಡಿಕೆಶಿ ಅವರಿಗೆ ಕರೆ ಮಾಡಿ, ತಾಳ್ಮೆಯಿಂದ ಇರುವಂತೆ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.