ADVERTISEMENT

8–10 ಬಿಜೆಪಿ ಸಂಸದರು ಚುನಾವಣೆಗೆ ಸ್ಪರ್ಧಿಸಲ್ಲ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 21:42 IST
Last Updated 5 ಫೆಬ್ರುವರಿ 2023, 21:42 IST
ಕನಕಪುರ ಆರ್‌ಇಎಸ್‌ ವಿದ್ಯಾ ಸಂಸ್ಥೆ ಚುನಾವಣೆಯ ನಂತರ ಡಿ.ಕೆ.ಶಿವಕುಮಾರ್‌ ಮಾಧ್ಯಮದವರೊಂದಿಗೆ ಮಾತನಾಡಿದರು
ಕನಕಪುರ ಆರ್‌ಇಎಸ್‌ ವಿದ್ಯಾ ಸಂಸ್ಥೆ ಚುನಾವಣೆಯ ನಂತರ ಡಿ.ಕೆ.ಶಿವಕುಮಾರ್‌ ಮಾಧ್ಯಮದವರೊಂದಿಗೆ ಮಾತನಾಡಿದರು   

ಕನಕಪುರ: ಸರ್ಕಾರದಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಲು ಸಾಧ್ಯವಾಗದ ಬಿಜೆಪಿಯ ಸಂಸದರು ಒಳಗೊಳಗೆ ಭಾರಿ ಅವಮಾನ ಎದುರಿಸುತ್ತಿದ್ದಾರೆ. ಹಾಗಾಗಿ ಈ ಬಾರಿ ಎಂಟರಿಂದ ಹತ್ತು ಬಿಜೆಪಿ ಸಂಸದರು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

‘ಈ ಸರ್ಕಾರದಲ್ಲಿ ಮಾತನಾಡಲು ನಮಗೆ ಧ್ವನಿ ಇಲ್ಲ ಎಂದು ಬಿಜೆಪಿ ಸಂಸದರು ನನ್ನ ಬಳಿ ನೋವು ತೋಡಿಕೊಂಡಿದ್ದಾರೆ. ಸದ್ಯಕ್ಕೆ ಅವರ ಹೆಸರು ಬೇಡ. ಆ ಸಂಸದರ ಯಾರು ಎಂಬ ಮಾಹಿತಿಯನ್ನು ಮುಂದೊಂದು ದಿನ ಬಹಿರಂಗ ಪಡಿಸುತ್ತೇನೆ’ ಎಂದರು.

ಡಬಲ್‌ ಇಂಜಿನ್‌ ಸರ್ಕಾರದಲ್ಲಿ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ಪಡೆಯಲು ರಾಜ್ಯದ ಬಿಜೆಪಿ ಸಂಸದರಿಂದ ಸಾಧ್ಯವಾಗಿಲ್ಲ. ಹಾಗಾಗಿ ಅವರು ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.