ADVERTISEMENT

ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 15:47 IST
Last Updated 28 ನವೆಂಬರ್ 2023, 15:47 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ಬೆಂಗಳೂರು: ‘ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ. ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ತೆಲಂಗಾಣದ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ‘ಜಾಹೀರಾತಿನಲ್ಲಿ ಸರ್ಕಾರದ ಕೆಲಸದ ಬಗ್ಗೆ ಮಾಹಿತಿ ಇದೆ. ಅದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಇಂಥ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಹೇಳಿಲ್ಲ. ಇದು ಉಲ್ಲಂಘನೆ ಹೇಗೆ ಆಗುತ್ತದೆ’ ಎಂದು ಪ್ರಶ್ನಿಸಿದರು.

ADVERTISEMENT

‘ನಾವು ಪತ್ರಿಕೆಗಳಲ್ಲಿ ನೀಡುವ ಜಾಹೀರಾತು ಕೆಲವೊಮ್ಮೆ ತೆಲಂಗಾಣ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೂ ಹೋಗುತ್ತದೆ. ಮತ ಯಾಚನೆ ಮಾಡಿದ್ದರೆ ಆಗ ನಿಯಮ ಉಲ್ಲಂಘನೆ ಆಗುತ್ತಿತ್ತು’ ಎಂದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಮಾತನಾಡಿ, ‘ಕಾನೂನು ಚೌಕಟ್ಟಿನಲ್ಲೇ ಜಾಹೀರಾತು ನೀಡಿದೆ. ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿರುವುದು ಸರಿಯಲ್ಲ. ಚುನಾವಣೆ ಆಯೋಗ ತಪ್ಪು ಮಾಡಿದೆ. ಬಿಜೆಪಿ ಕೂಡ ಇದೇ ರೀತಿ ಜಾಹೀರಾತು ನೀಡಿತ್ತು. ಕರ್ನಾಟಕ ಸರ್ಕಾರ ನೋಟಿಸ್‌ಗೆ ಸೂಕ್ತ ಉತ್ತರ ನೀಡಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.