ADVERTISEMENT

ಪ್ರತಿಭಟನಾ ವೇದಿಕೆಯಲ್ಲಿ ಪರಿಷ್ಕೃತ ಪಠ್ಯಪುಸ್ತಕದ‌ ಪ್ರತಿ ಹರಿದು ಎಸೆದ ಡಿಕೆಶಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 11:13 IST
Last Updated 18 ಜೂನ್ 2022, 11:13 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್   

ಬೆಂಗಳೂರು: ಪರಿಷ್ಕೃತ ಪಠ್ಯ ಪುಸ್ತಕದ ಪ್ರತಿಯನ್ನು ವೇದಿಕೆಯಲ್ಲೆ ಹರಿದು ಎಸೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸುವಂತೆ ಆಗ್ರಹಿಸಿದರು.

ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡ ಅವರು ಭಾಷಣ ಮುಗಿಸಿದ ಬಳಿಕ ಪರಿಷ್ಕೃತ ಪಠ್ಯಪುಸ್ತಕದ ಪ್ರತಿಯೊಂದನ್ನು ಹರಿದು ಎಸೆದರು.

ಈ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಹಳ್ಳಿ, ಹಳ್ಳಿಗೂ ಹೋರಾಟ ಕೊಂಡೊಯ್ಯುತ್ತೇವೆ.‌ ಸರ್ಕಾರ ತಕ್ಷಣ ಪರಿಷ್ಕೃತ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕು.‌ ಇಲ್ಲವಾದರೆ 2024ರ ಚುನಾವಣೆಯ ಬಳಿಕ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕಿತ್ತೆಸೆಯಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.