ADVERTISEMENT

ನಾಯಕರನ್ನು ಭೇಟಿ ಮಾಡಲೆಂದೇ ದೆಹಲಿಗೆ ಬಂದಿದ್ದೇನೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 7:39 IST
Last Updated 16 ಜನವರಿ 2026, 7:39 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ನವದೆಹಲಿ: ಮುಖ್ಯಮಂತ್ರಿ ಸ್ಥಾನದ ವಿಷಯ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವಂತಹದ್ದಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ಈ ಸಭೆಯ ಯೋಜನೆಗಳೇನು ಎಂದು ಕೇಳಿದಾಗ, 'ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ. ಅವರು ನೀಡುತ್ತಾರೆ' ಎಂದರು.

ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, 'ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ' ಎಂದರು.

ADVERTISEMENT

ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, 'ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.