ADVERTISEMENT

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2025, 7:48 IST
Last Updated 2 ಮಾರ್ಚ್ 2025, 7:48 IST
   

ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.

ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ ಧರ್ಮದಲ್ಲೂ ಹೇಳಿಲ್ಲ’ ಎಂದರು.

ADVERTISEMENT

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.