
ಪ್ರಜಾವಾಣಿ ವಾರ್ತೆ
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರು.
ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ.
ಸಂಜೆ 4.30ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.