
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ವಿರೋಧ ಪಕ್ಷಗಳು ಟೀಕೆ ಮಾಡುವುದು ಸ್ವಾಗತಾರ್ಹ. ಆದರೆ ಅದಕ್ಕೂ ಮಿತಿ ಇದೆ. ಮಿತಿ ಮೀರಿದಾಗ ಕಾನೂನು ಮೊರೆ ಹೋಗಬೇಕಾಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರ ಬಳಸಿಕೊಂಡು ‘ಸ್ಕ್ಯಾಮ್‌ಲಾರ್ಡ್ಸ್’ ಎಂಬ ಪೋಸ್ಟರ್ ಅನ್ನು ಬಿಜೆಪಿ ಸಾಮಾಜಿಕ ಜಾಲತಾಣ ಘಟಕವು ಹಂಚಿಕೊಂಡಿತ್ತು. ಅದರ ವಿರುದ್ಧ ಕೆಪಿಸಿಸಿಯು ಸೈಬರ್ ಪೊಲೀಸರಿಗೆ ದೂರು ನೀಡಿತ್ತು.
ಸುದ್ದಿಗಾರರು ಈ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಟೀಕೆ ವಿಚಾರದಲ್ಲಿ ವಿರೋಧ ಪಕ್ಷಗಳು ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಹೀಗಾಗಿ ದೂರು ನೀಡಲಾಗಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ ಎಂದು ನಮ್ಮ ತಂಡದವರಿಗೂ ಸೂಚನೆ ನೀಡಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.