ADVERTISEMENT

ವರಿಷ್ಠರ ಭೇಟಿಗೆ ಬಂದ ಡಿ.ಕೆ. ಸುರೇಶ್‌

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 15:37 IST
Last Updated 28 ನವೆಂಬರ್ 2025, 15:37 IST
<div class="paragraphs"><p>ಡಿ.ಕೆ. ಸುರೇಶ್‌</p></div>

ಡಿ.ಕೆ. ಸುರೇಶ್‌

   

ನವದೆಹಲಿ: ಅಧಿಕಾರ ಹಸ್ತಾಂತರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುವಂತೆ ಹೈಕಮಾಂಡ್‌ಗೆ ಒತ್ತಡ ಹೇರಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್‌ ಶುಕ್ರವಾರ ರಾಷ್ಟ್ರ ರಾಜಧಾನಿಗೆ ಬಂದಿದ್ದಾರೆ. 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಗೆ ಸುರೇಶ್ ಕಾಲಾವಕಾಶ ಕೋರಿದ್ದಾರೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್‌ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸದ್ಯ ನವದೆಹಲಿಯಲ್ಲಿಲ್ಲ. ಹಾಗಾಗಿ, ಅವರಿಬ್ಬರ ಭೇಟಿ ಸಾಧ್ಯತೆ ಕಡಿಮೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸುರೇಶ್ ಶನಿವಾರ ಭೇಟಿ ಮಾಡುವ ಸಂಭವ ಇದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.