ADVERTISEMENT

ಇ.ಡಿ. ವಿಚಾರಣೆ ಎದುರಿಸಿದ ಡಿ.ಕೆ.ಸುರೇಶ್

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 19:45 IST
Last Updated 3 ಅಕ್ಟೋಬರ್ 2019, 19:45 IST
ಡಿ.ಕೆ.ಸುರೇಶ್
ಡಿ.ಕೆ.ಸುರೇಶ್   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಸಂಸದ ಡಿ.ಕೆ. ಸುರೇಶ ಗುರುವಾರ ಜಾರಿ ನಿರ್ದೇಶನಾಲಯ (ಇ.ಡಿ)ದ ವಿಚಾರಣೆ ಎದುರಿಸಿದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಸಂಬಂಧಿಸಿದ ವ್ಯವಹಾರಗಳ ಕುರಿತು ಹೇಳಿಕೆ ನೀಡಲು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್‌ ಜಾರಿ ಮಾಡಿತ್ತು.

ಇ.ಡಿ. ಕಚೇರಿಗೆ ಬೆಳಿಗ್ಗೆ 11ಕ್ಕೆ ತೆರಳಿದ ಸುರೇಶ್‌, ಸಂಜೆ 6.30ರವರೆಗೆ ವಿಚಾರಣೆ ಎದುರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT