ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂಬ ಚಿಂತನೆ ಇದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕರಾವಳಿ ಭಾಗದ ಜನಪ್ರತಿನಿಧಿಗಳು, ಸಂಬಂಧಪಟ್ಟ ಸಚಿವರ ಜತೆ ಮೊದಲ ಸಭೆ ನಡೆಸಲಾಯಿತು. ಅಧಿಕಾರಿಗಳೂ ಸಭೆಯಲ್ಲಿ ಹಾಜರಿದ್ದರು’ ಎಂದರು.
‘ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಸಚಿವಾಲಯಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.