ADVERTISEMENT

ಜಾಮೀನಿಗಾಗಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2019, 20:17 IST
Last Updated 26 ಸೆಪ್ಟೆಂಬರ್ 2019, 20:17 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಜಾಮೀನು ಕೋರಿ ಗುರುವಾರ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಶಿವಕುಮಾರ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ವಿಶೇಷ ನ್ಯಾಯಾಲಯ ಬುಧವಾರ ಹೊರಡಿಸಿರುವ ಆದೇಶದ ಸಿಂಧುತ್ವ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ. ಕೋಟ್ಯಂತರ ರೂಪಾಯಿ ಅಕ್ರಮವಾಗಿ ವರ್ಗಾವಣೆ ಆಗಿರುವ ಕುರಿತ ತನಿಖೆ ಆರಂಭದ ಹಂತದಲ್ಲಿ ಇರುವುದರಿಂದ ಜಾಮೀನು ನೀಡಲಾಗದು ಎಂದು ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ನೀಡಿದ್ದ ಆದೇಶದಲ್ಲಿ ತಿಳಿಸಿದ್ದರು.

ಇ.ಡಿ. ವಶದಲ್ಲಿದ್ದಾಗ ಅಧಿಕಾರಿಗಳು ಪಡೆದಿರುವ ಹೇಳಿಕೆಗಳ ದಾಖಲೆ ಸಲ್ಲಿಸುವಂತೆ ಕೋರಿ ಶಿವಕುಮಾರ್‌ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿದ ದೆಹಲಿ ಹೈಕೋರ್ಟ್‌ ಈ ಕುರಿತ ಆದೇಶವನ್ನು ಕಾದಿರಿಸಿದೆ. ಶಿವಕುಮಾರ್‌ ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್‌ 1ಕ್ಕೆ ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.