ADVERTISEMENT

ಡಿ.ಕೆ.ಶಿ ಬಂಧನ ವೇಳೆ ಪ್ರತಿಭಟನೆ: ₹ 82 ಕೋಟಿ ನಷ್ಟ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 19:42 IST
Last Updated 27 ಜನವರಿ 2020, 19:42 IST
   

ಬೆಂಗಳೂರು: ‘ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಅಂದಾಜು ₹82 ಕೋಟಿ ನಷ್ಟವಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘2019ರ ಸೆಪ್ಟೆಂಬರ್‌ 4ರಿಂದ 11ರವರೆಗೆ ಜಿಲ್ಲೆಯ ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ₹ 82 ಕೋಟಿ ನಷ್ಟವಾಗಿದೆ. 40 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ’ ಎಂದರು.

ADVERTISEMENT

ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.