ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುಮಾರು ಒಂದೂವರೆ ಗಂಟೆ ಚರ್ಚೆ ನಡೆಸಿದ್ದಾರೆ.
ಆರೋಗ್ಯ ಕಾರಣದಿಂದ ಬೆಂಗಳೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಶಿವಕುಮಾರ್, ನಂತರ ತಮ್ಮ ಜತೆಗಿದ್ದ ಎಲ್ಲರನ್ನೂ ಹೊರಗೆ ಕಳುಹಿಸಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.
‘ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಬರೆದ ಪತ್ರ, ಅದಕ್ಕೆ ಪೂರಕವಾಗಿ ಸಂಪುಟ ತೆಗೆದುಕೊಂಡ ನಿರ್ಧಾರ. ನಂತರದ ಬೆಳವಣಿಗೆಳ ಕುರಿತು ಒಂದಷ್ಟು ಮಾತುಕತೆ ನಡೆಸಿದರು’ ಎಂದು ಪಕ್ಷದ ಮೂಲಗಳು ಹೇಳಿವೆ.
ನಾಯಕತ್ವ ಬದಲಾವಣೆ ಕುರಿತು ಮೈಸೂರು ಹಾಗೂ ಹಾಸನದಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆ, ಕೆಲ ಸಚಿವರು, ಶಾಸಕರ ಬಹಿರಂಗ ಮಾತುಗಳು, ಕಾಂಗ್ರೆಸ್ ಸಂಘಟನೆ, ಬಿಹಾರ ಚುನಾವಣೆ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದೂ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.