ಡಿಎನ್‌ಎ ಪರೀಕ್ಷೆ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ‘ಡಿಎನ್‌ಎ ಪರೀಕ್ಷೆಯ ಫಲಿತಾಂಶ ಅತ್ಯಂತ ನಿಖರವಾಗಿರುತ್ತದೆ. 10 ಲಕ್ಷ ಜನರಲ್ಲಿ ಕೇವಲ ಒಬ್ಬ ವ್ಯಕ್ತಿಯ ಫಲಿತಾಂಶ ಮಾತ್ರವೇ ತಪ್ಪು ಬರಬಹುದು’ ಎಂದು ಹೈಕೋರ್ಟ್‌ನ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು ಅಭಿಪ್ರಾಯ ಪಡುತ್ತಾರೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿ ದಡದ ಕಾಡಿನಲ್ಲಿ ಗುರುವಾರ ಪತ್ತೆಯಾಗಿರುವ ಮೂಳೆಗಳ ಮರಣೋತ್ತರ ಪರೀಕ್ಷೆಯ ನಂತರದಲ್ಲಿ ನಡೆಯುವ ಕಾನೂನು ಪ್ರಕ್ರಿಯೆಯ ಕುರಿತ ವಿವರ ನೀಡಿರುವ ಅವರು, ‘ಡಿಎನ್‌ಎ ಬಹುಮುಖ್ಯ ಪಾತ್ರ ವಹಿಸಲಿದೆ’ ಎಂದಿದ್ದಾರೆ.
‘ಸಾವಿನ ನಿಖರ ಕಾರಣ ಪತ್ತೆಹಚ್ಚುವ ವಿವಿಧ ಪರೀಕ್ಷೆಗಳು ನಡೆಯುತ್ತವೆ. ಅವುಗಳಲ್ಲಿ ಬಹುಮುಖ್ಯವಾಗಿ ಮೂಳೆಗಳಲ್ಲಿನ ಮೃದುವಾದ ರಕ್ತಾವೃತ ಕೋಶವನ್ನು (ಬೋನ್ ಮ್ಯಾರೊ) ತೆಗೆದುಕೊಂಡು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮೃತರ ಪೋಷಕರು, ಸಂಬಂಧಿಗಳ ಜೊತೆ ಹೋಲಿಕೆ ಮಾಡಲಾಗುತ್ತದೆ. ವಿಶೇಷ ಎಂದರೆ ಸಾವಿನ 50 ವರ್ಷಗಳ ನಂತರವೂ ಮೂಳೆಗಳಲ್ಲಿನ ಮೃದು ಕೋಶವನ್ನು ಪಡೆಯಲು ಸಾಧ್ಯ’ ಎಂದು ಅವರು ಹೇಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.