ADVERTISEMENT

ವೈದ್ಯರ ರಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 19:51 IST
Last Updated 29 ಜುಲೈ 2021, 19:51 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಕೈಗೊಂಡ ಕ್ರಮಗಳನ್ನು ವಿವರಿಸುವ ಹೇಳಿಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಹುಬ್ಬಳ್ಳಿಯ ವೈದ್ಯ ಹಾಗೂ ಸಾಮಾಜಿಕ ಹೋರಾಟಗಾರ ಡಾ. ವಿನೋದ್‌ ಜಿ. ಕುಲಕರ್ಣಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ವೈದ್ಯರ ರಕ್ಷಣೆಗೆ ಅನುಸರಿಸಿರುವ ಕ್ರಮಗಳನ್ನು ಒಳಗೊಂಡ ಆಕ್ಷೇಪಣಾ ಅರ್ಜಿಯನ್ನು 3 ವಾರಗಳಲ್ಲಿ ಸಲ್ಲಿಸಬೇಕು’ ಎಂದು ತಿಳಿಸಿತು.

ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆರೋಗಿಗಳ ಸಂಬಂಧಿಕರು ಆಗಾ‌ಗ ದಾಳಿ ನಡೆಸುತ್ತಿದ್ದಾರೆ. ‘ವೈದ್ಯೋ ನಾರಾಯಣೋ ಹರಿ’ ಎಂದು ವೈದ್ಯರನ್ನು ದೇವರ ಸಮಾನ ಎಂದು ಪರಿಗಣಿಸಲಾಗುತ್ತಿತ್ತು. ಆದರೆ, ಈಗ ಹಲ್ಲೆಗಳು ನಡೆಯುತ್ತಿವೆ. ವೈದ್ಯರ ಮೇಲಿನ ದೌರ್ಜನ್ಯ ಸಂವಿಧಾನದ 21ನೇ ವಿಧಿಯ ಉಲ್ಲಂಘನೆ ಎಂದು ಅರ್ಜಿದಾರರು ಪ್ರತಿಪಾದಿಸಿದರು.

ADVERTISEMENT

ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರಿಗೆ 10 ವರ್ಷದ ತನಕ ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಲು ಕಾನೂನು ರೂಪಿಸಲು ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.