ADVERTISEMENT

ವೈದ್ಯರ ಮೇಲೆ ಹಲ್ಲೆ: ಪಿಐಎಲ್‌ ವಜಾ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 16:24 IST
Last Updated 2 ಡಿಸೆಂಬರ್ 2021, 16:24 IST

ಬೆಂಗಳೂರು: ‘ರೋಗಿಗಳ ಸಂಬಂಧಿಗಳಿಂದ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಪ್ರಕರಣ ತಡೆಯುವ ದಿಸೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಹುಬ್ಬಳ್ಳಿಯ ಡಾ.ವಿನೋದ್ ಕುಲಕರ್ಣಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಸರ್ಕಾರಿ ಹಾಗೂ ಖಾಸಗಿ ವೈದ್ಯರ ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ‘ವ್ಯಾಪಕ ಆದೇಶ’ (ಬ್ಲಾಂಕೆಟ್‌ ಆರ್ಡರ್‌) ನೀಡಲು ಸಾಧ್ಯವಿಲ್ಲ. ಹಲ್ಲೆ ಪ್ರಕರಣಗಳು ಸಂಭವಿಸಿದಾಗ ಅವುಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ನಿಯಮಾನುಸಾರ ದೂರು ನೀಡಿದರೆ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.