ADVERTISEMENT

ಸಂವಿಧಾನ ತಿದ್ದುಪಡಿ ಅನಿವಾರ್ಯ: ದೊಡ್ಡರಂಗೇಗೌಡ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 21:45 IST
Last Updated 20 ಫೆಬ್ರುವರಿ 2021, 21:45 IST
   

ಹಾಸನ: ‘ಬಿ.ಆರ್‌. ಅಂಬೇಡ್ಕರ್ ರಚಿಸಿರುವ ಸಂವಿಧಾನದ ಕೆಲ ಕಾನೂನುಗಳು 2021ಕ್ಕೆ ಪ್ರಸ್ತುತ ಅಲ್ಲ. ಹಾಗಾಗಿ ಸಂವಿಧಾನ ತಿದ್ದುಪಡಿ ಅನಿವಾರ್ಯ’ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಪ್ರೊ. ದೊಡ್ಡರಂಗೇಗೌಡ ಹೇಳಿದರು.

ಶನಿವಾರ ನಡೆದ ಹಾಸನ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಈ ದೇಶ, ಹೊಸ ಕಾಲಕ್ಕೆ ತಕ್ಕಂತೆ ಸಂವಿಧಾನವನ್ನು ಬರೆಯುವ ಪ್ರಯತ್ನ ಮಾಡುವುದಾದರೆ, ಇದಕ್ಕಿಂತ ದೊಡ್ಡ ಕೆಲಸ ಮತ್ತೊಂದಿಲ್ಲ. ಇದರಿಂದ ಸರ್ವರಿಗೆ ಸಮಪಾಲು, ಸಮಬಾಳು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಈ ಪ್ರಯತ್ನ ಮಾಡಬೇಕು’ ಎಂದು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.