ADVERTISEMENT

ಆಂಧ್ರದ ತಕರಾರರಿಗೆ ಡೋಂಟ್‌ಕೇರ್‌- ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 2 ಜನವರಿ 2022, 13:18 IST
Last Updated 2 ಜನವರಿ 2022, 13:18 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಮಾನ್ಯತೆ ನೀಡುವುದಕ್ಕೆ ಆಂಧ್ರಪ್ರದೇಶ ಆಕ್ಷೇಪ ವ್ಯಕ್ತಪಡಿಸಿದೆ. ಈ ತಕರಾರಿಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯ ಬಗ್ಗೆ ಭಾನುವಾರ ಪ್ರಗತಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.6ರಂದು ಉನ್ನತ ಸಮಿತಿ ಸಭೆ ನಡೆದಿತ್ತು. ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಕ್ಕೆ ಲಿಖಿತ ಅಭಿಪ್ರಾಯ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ಈ ಅವಕಾಶವನ್ನು ಬಳಸಿಕೊಂಡ ಆಂಧ್ರಪ್ರದೇಶ, ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದೆ’ ಎಂದು ಹೇಳಿದರು.

‘ಭದ್ರಾ ಮೇಲ್ದಂಡೆ ಯೋಜನೆಯ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮೂರು ಬಾರಿ ದೆಹಲಿಗೆ ಭೇಟಿ ನೀಡಿ ಜಲಶಕ್ತಿ ಮಂತ್ರಾಲಯದೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ವಾರದಲ್ಲಿ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡುವ ವಿಚಾರ ಕೇಂದ್ರ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ. ಭದ್ರಾ ಮೇಲ್ದಂಡೆ ಶೀಘ್ರವೇ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಆಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಕರ್ನಾಟಕದ ನದಿ ನೀರನ್ನು ಬಳಕೆ ಮಾಡಿಕೊಳ್ಳುತ್ತಿವೆ. ಅನುಮತಿ ಪಡೆಯದೇ ಅನಧಿಕೃತವಾಗಿ ಹಲವು ಯೋಜನೆಗಳನ್ನು ರೂಪಿಸಿವೆ. ಇದಕ್ಕೆ ತಕರಾರರು ಸಲ್ಲಿಸುವ ನಿಟ್ಟಿನಲ್ಲಿ ರಾಜ್ಯದ ಕಾನೂನು ಪರಿಣಿತರು ಹಾಗೂ ಅಧಿಕಾರಗಳ ತಂಡ ಕೆಲಸ ಮಾಡುತ್ತಿದೆ’ ಎಂದರು.

***

ಕರ್ನಾಟಕದ ನೆಲ, ಜಲದ ಮೇಲೆ ಕನ್ನಡಿಗರಿಗೆ ಸಂಪೂರ್ಣ ಅಧಿಕಾರವಿದೆ. ಅಷ್ಟು ಸುಲಭವಾಗಿ ಆಂಧ್ರಪ್ರದೇಶಕ್ಕೆ ಬಿಟ್ಟುಕೊಡುವ ಪ್ರಶ್ನೆ ಇಲ್ಲ. ನಮ್ಮ ಮೇಲೆ ದಾಳಿ ನಡೆಸಲು ಬಂದರೆ ಸುಮ್ಮನಿರುವುದಿಲ್ಲ.

ಎ.ನಾರಾಯಣಸ್ವಾಮಿ,ಕೇಂದ್ರ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.